ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಚಾಲಕ, ಶೀಘ್ರಲಿಪಿಗಾರ, ಆದೇಶಜಾರಿಕಾರ ಹಾಗೂ ಇತರೆ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಚಾಲಕ, ಶೀಘ್ರಲಿಪಿಗಾರ, ಆದೇಶಜಾರಿಕಾರ ಹಾಗೂ ಇತರೆ ಹುದ್ದೆಗಳು
ಒಟ್ಟು ಹುದ್ದೆಗಳು: 45
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಶೀಘ್ರಲಿಪಿಗಾರ ಗ್ರೇಡ್ 3 | 8 |
ಬೆರಳಚ್ಚುಗಾರ | 14 |
ಬೆರಳಚ್ಚು – ನಕಲುಗಾರ | 6 |
ಆದೇಶ ಜಾರಿಕಾರ | 11 |
ಚಾಲಕ | 1 |
ಪ್ಯೂನ್/ಜವಾನ | 5 |
ವಿದ್ಯಾರ್ಹತೆ:
- ಶೀಘ್ರಲಿಪಿಗಾರ ಗ್ರೇಡ್ 3 : ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 2nd PUC ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಬೆರಳಚ್ಚುಗಾರ: ಹುದ್ದೆಗೆಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಸೀನಿಯರ್ ಗ್ರೇಡ್ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಬೆರಳಚ್ಚು – ನಕಲುಗಾರ: ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 2nd PUC ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಕಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ.
- ಆದೇಶ ಜಾರಿಕಾರ: SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
- ಚಾಲಕ: ಹುದ್ದೆಗೆ ಅರ್ಜಿಸಲ್ಲಸುವ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
- ಪ್ಯೂನ್/ಜವಾನ: ಹುದ್ದೆಗೆ ಅರ್ಜಿಸಲ್ಲಸುವ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಓದಲು, ಬರೆಯಲು ತಿಳಿದಿರಬೇಕು.
ವಯೋಮಿತಿ:
ಚಿಕ್ಕಬಳ್ಳಾಪುರ ಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
- SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
- ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷ
ಅರ್ಜಿಶುಲ್ಕ:
- PH ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
- SC/ST/Cat-I/Cat-2A/2B/3A & 3B ಅಭ್ಯರ್ಥಿಗಳಿಗೆ: ರೂ.100/-
- ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.200/-
- ಪಾವತಿ ವಿಧಾನ: ಆನ್ಲೈನ್
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹17,000-52,650/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ @ chikkaballapur.dcourts.gov.in ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
- ಚಾಲಕ, ಬೆರಳಚ್ಚುಗಾರ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 18-12-2023 ರಿಂದ 17-01-2024 ರವರೆಗೆ ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ chikkaballapur.dcourts.gov.in ನಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18-12-2023
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-01-2024
- ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 18-01-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಜವಾಹರಲಾಲ್ ಇನ್ಸ್ಟಿಟ್ಯೂಟ್ ನೇಮಕಾತಿ | JIPMER Recruitment 2023
- ಇಂಟೆಲಿಜೆನ್ಸ್ ಬ್ಯೂರೋ ನೇಮಕಾತಿ | IB Recruitment 2023
- ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ | NTRO Recruitment 2023
- ಗೋವಾ ಶಿಪ್ಯಾರ್ಡ್ ನೇಮಕಾತಿ | Goa Shipyard Recruitment 2023
- ಎಕ್ಸಿಮ್ ಬ್ಯಾಂಕ್ ನೇಮಕಾತಿ | Exim Bank Recruitment 2023