ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಕರ್ನಾಟಕ ಸರ್ಕಾರವು ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಮಿಕರು ಎಲ್ಲಾ ಸೌಲಭ್ಯಗಳನ್ನು ಸಮಪರ್ಕವಾಗಿ ಬಳಸಿಕೊಳ್ಳುತ್ತಿದ್ದಾರೆ. ಇದೀಗ ಕಾರ್ಮಿಕರಿಗೆ ಅಪಘಾತ ಪರಿಹಾರ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯ ಸಂಪೂರ್ಣ ಲಾಭವನ್ನು ಪ್ರತಿಯೊಬ್ಬರೂ ಕೂಡ ಪಡೆದುಕೊಳ್ಳಬೇಕು. ಈ ಕುರಿತು ವಿವರವಾದ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.
ಯೋಜನೆಯ ಉದ್ದೇಶ:
ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರ ಮನೆ ಬಾಗಿಲಿಗೆ ಪತ್ರಿಕೆಗಳನ್ನು ವಿತರಿಸುತ್ತಾರೆ. ಸದರಿ ಕಾರ್ಮಿಕರಲ್ಲಿ ಬಹುತೇಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಪಘಾತಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಸದರಿ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿತರಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಯೋಜನೆಯ ಉದ್ದೇಶವಾಗಿರುತ್ತದೆ.
ನೋಂದಣಿ ವಿಧಾನ:
ಇ-ಶ್ರಮ್ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ನೋಂದಣಿ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (CSC)ಗಳು, ಬಾಪೂಜಿ ಸೇವಾ ಕೇಂದ್ರಗಳು, ಅಂಚೆ ಕಛೇರಿಗಳು ಹಾಗೂ ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಗ್ರಾಮ ಒನ್ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳುವುದು.
ಸೌಲಭ್ಯ ಪಡೆಯಲು ಅರ್ಹತೆಗಳು:
- ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
- 16 ರಿಂದ 59 ವಯೋಮಾನದವರಾಗಿರಬೇಕು.
- ಕೇಂದ್ರ ಸರ್ಕಾರದ ಇ-ಶ್ರಮ್ ಪೋರ್ಟಲ್ನಲ್ಲಿ “News Paper Boy” ಎಂಬ ವರ್ಗದಡಿ ನೋಂದಣಿಯಾಗಿರಬೇಕು.
- ಆದಾಯ ತೆರಿಗೆ ಪಾವತಿದಾರರಾಗಿರಬಾರದು.
- ಇ.ಎಸ್.ಐಮತ್ತು ಇ.ಪಿ.ಎಫ್ ಸೌಲಭ್ಯ ಹೊಂದಿರಬಾರದು.
ಅವಶ್ಯಕ ದಾಖಲೆಗಳು:
- ಅಧಾರ್ಕಾರ್ಡ್
- ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ
- ಬ್ಯಾಂಕ್ಖಾತೆ ವಿವರಗಳು.
ಪ್ರಯೋಜನಗಳು:
- ಅಪಘಾತದಿಂದ ಮರಣ ಹೊಂದಿದಲ್ಲಿ ರೂ. 2.00 ಲಕ್ಷ,
- ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2.00 ಲಕ್ಷಗಳವರೆಗೆ (ಶೇಕಡವಾರು ದುರ್ಬಲತೆ ಆಧಾರದಮೇಲೆ).
- ಅಪಘಾತ ಅಥವಾ ಮಾರಣಾಂತಿಕ ಕಾಯಿಲೆ ಅಥವಾ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ ಮರುಪಾವತಿ ರೂ.1.00 ಲಕ್ಷಗಳವರೆಗೆ.
ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಅರ್ಹ ಫಲಾನುಭವಿಗಳು, ಯೋಜನೆಯಡಿ ನಿಗದಿಪಡಿಸಿದ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಕಾರ್ಮಿಕ ಅಧಿಕಾರಗಳ ಕಛೇರಿ/ ಹಿರಿಯ ಕಾರ್ಮಿಕ/ಕಾರ್ಮಿಕ ನಿರೀಕ್ಷಕರುಗಳ ಕಛೇರಿಗೆ ಅರ್ಜಿಯನ್ನು ಸಲ್ಲಿಸಿ ಸೌಲಭ್ಯವನ್ನು ಪಡೆಯಬಹುದಾಗಿದೆ.
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೇ ಆನ್ಲೈನ್ | Click Here |
ಅಧಿಕೃತ ವೆಬ್ಸೈಟ್ | Click Here |
ಸಂಪೂರ್ಣ ಯೋಜನೆಯ ಮಾಹಿತಿ PDF | Click Here |
ಇತರೆ ವಿದ್ಯಾರ್ಥಿವೇತನಗಳು:
- ಟಾಟಾ ಕ್ಯಾಪಿಟಲ್ ವಿದ್ಯಾರ್ಥಿವೇತನ | Tata Capital Scholarship 2024
- ಆಧಾರ್ ಕೌಶಲ್ ವಿದ್ಯಾರ್ಥಿವೇತನ 2024 | Aadhaar Kaushal Scholarship 2024
- ವಿದ್ಯಾಧನ್ ಕರ್ನಾಟಕ ವಿದ್ಯಾರ್ಥಿವೇತನ 2024 | Vidyadhan Karnataka Scholarship 2024
- ಲೇಬರ್ ಕಾರ್ಡ್ ವಿದ್ಯಾರ್ಥಿವೇತನ 2024 | Labour Card Scholarship 2024
- ಉನ್ನತ ಶಿಕ್ಷಣ ಸಬ್ಸಿಡಿ ಯೋಜನೆ 2024 | CSIS Higher Education Subsidy Scheme 2024