ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಪ್ರೋತ್ಸಾಹವನ್ನು ನೀಡಲು ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಬರೆದು ಉತ್ತಮ ಅಂಕಗಳಿಂದ ಪಾಸಾದ ಅಭ್ಯರ್ಥಿಗಳಿಗೆ ಪ್ರೋತ್ಸಾಹ ಧನವನ್ನು ನೀಡಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕು, ಅರ್ಹತೆಗಳೇನು ಇದೆಲ್ಲದರ ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.
ಬೆಂಗಳೂರು ಮಹಾನಗರ ಪಾಲಿಕೆಯಿಂದ ಕಲ್ಯಾಣ ಕಾರ್ಯಕ್ರಮದಡಿ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಆರ್ಥಿಕವಾಗಿ ನೆರವು ನೀಡಲು ಅರ್ಹ ಅಭ್ಯರ್ಥಿಗಳನ್ನು ಗುರುತಿಸಿ ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು:
ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ/ಸಿಬಿಎಸ್ಇ/ಐಸಿಎಸ್ಇ ನಡೆಸುವ 10ನೇ ತರಗತಿಯಲ್ಲಿ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪ.ಜಾ/ಪ.ಪಂ ವರ್ಗದ ಪೌರಕಾರ್ಮಿಕರ ಅವಲಂಬಿತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಕರ್ನಾಟಕದ ಖಾಯಂ ಸಿವಾಸಿಗಳಾಗಿರಬೇಕು.
ವಿದ್ಯಾರ್ಥಿಯು ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಧಾರ ಗುರುತಿನ ಚೀಟಿಯನ್ನು ಹೊಂದಿರಬೇಕು.
ದಾಖಲೆಗಳು:
ವಿದ್ಯಾರ್ಥಿಯ ಆಧಾರ್ ಕಾರ್ಡ್
ಪೋಟೋ
ಬ್ಯಾಂಕ್ ಪಾಸ್ ಬುಕ್ ಪ್ರತಿ
ನಿವಾಸ ದೃಡೀಕರಣ ಪತ್ರ
ವಯಸ್ಸು ದೃಡೀಕರಣ ಪ್ರಮಾಣ ಪತ್ರ
ರೇಷನ್ ಕಾರ್ಡ್ ಪ್ರತಿ
ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ
ಪ್ರಯೋಜನಗಳು:
15,000/- ಪ್ರೋತ್ಸಾಹಧನ
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ:
02-ಮೇ-2025
ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?
ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ(BBMP) ಸಹಾಯಕ ಕಂದಾಯ ಅಧಿಕಾರಿ(ಕಲ್ಯಾಣ) ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಸ್ವಯಂ ದೃಡೀಕರಿಸಿ ಅರ್ಜಿಯನ್ನು ಸಲ್ಲಿಸಬೇಕು.