SSLC ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ | Free Laptop for SSLC Students 2025

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಈ ಬಾರಿ SSLC ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ ಟಾಪ್‌ ವಿತರಿಸಲು ಸರ್ಕಾರ ನಿರ್ಧರಿಸಿದೆ. ಈ ಯೋಜನೆಯು ಗ್ರಾಮೀಣ ಹಾಗೂ ಬಡ ಕುಟುಂಬಗಳ ಪ್ರತಿಭಾವಂತ ಮಕ್ಕಳಿಗೆ ಡಿಜಿಟಲ್ ಸಾಧನ ಸೌಲಭ್ಯವನ್ನು ಒದಗಿಸುವ ಮೂಲಕ ಅವರ ಭವಿಷ್ಯಕ್ಕೆ ಸಹಾಯ ಮಾಡಲಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.

Free Laptop for SSLC Students 2025
  • ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • 2025 ರ ಏಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದ ಆಧಾರದಲ್ಲಿ ಪ್ರತಿಯೊಂದು ಶೈಕ್ಷಣಿಕ ಜಿಲ್ಲೆಯಲ್ಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ ಮೊದಲ ಮೂರು ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಈ ಉಚಿತ ಲ್ಯಾಪ್‌ಟಾಪ್ ವಿತರಿಸಲಾಗುತ್ತದೆ.
  • ತಾಲ್ಲೂಕು ಮಟ್ಟದಲ್ಲಿಯೂ ಮೊದಲ ಮೂರು ಸ್ಥಾನಗಳ ವಿಜೇತರಿಗೂ ಈ ಯೋಜನೆಯ ಲಾಭ ದೊರೆಯಲಿದೆ.
  • ಜಿಲ್ಲಾ ಮಟ್ಟದಲ್ಲಿ ಈ ಯೋಜನೆಯ ಪ್ರಯೋಜನ ಪಡೆದಿದ್ದರೆ ವಲಯ ಮಟ್ಟದಲ್ಲಿ ಪಡೆಯಲು ಅವಕಾಶ ಇರುವುದಿಲ್ಲ.

1. ವಿದ್ಯಾರ್ಥಿಯ ಅಂಕಪಟ್ಟಿ
2. ವಿದ್ಯಾರ್ಥಿಯ ಆಧಾರ್ ಕಾರ್ಡ್
3. ಪೋಟೋ
4. ಶಾಲಾ ದಾಖಲಾತಿ ವಿವರ
5. ನಿವಾಸ ದೃಡೀಕರಣ ಪ್ರಮಾಣ ಪತ್ರ

ಪ್ರತೀ ವರ್ಷ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದ ಬಳಿಕ 2-3 ತಿಂಗಳಲ್ಲಿ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತಿತ್ತು. ಕಳೆದ ಸಾಲಿನಲ್ಲಿ ತಾಂತ್ರಿಕ ದೋಷದ ನಿಮಿತ್ತ ಲ್ಯಾಪ್‌ಟಾಪ್ ವಿತರಣೆ ತಡವಾಗಿದ್ದು, ಇದೀಗ ಸರ್ಕಾರದಿಂದ ಅನುಮತಿ ಸಿಕ್ಕ ತಕ್ಷಣ ವಿತರಣಾ ಪ್ರಕ್ರಿಯೆ ಆರಂಭವಾಗಲಿದೆ. ಈ ಯೋಜನೆ ಸ್ವಯಂಚಾಲಿತವಾಗಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರು ಅಥವಾ ಜಿಲ್ಲಾ ಶಿಕ್ಷಣಾಧಿಕಾರಿಗಳ ಮೂಲಕ ಲ್ಯಾಪ್‌ಟಾಪ್ ವಿತರಣೆಯ ಮಾಹಿತಿ ನೀಡಲಾಗುತ್ತದೆ.

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌Click Here


Leave a Reply

Join WhatsApp Group