ಮಹಿಳಾ ಸ್ವ-ಉದ್ಯೋಗ ಯೋಜನೆ | Women Self-Employment Scheme 2025

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಸರ್ಕಾರವು ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರು ಸ್ವ ಉದ್ಯೋಗ ಯೋಜನೆಯ ಲಾಭ ಪಡೆಯಲು ಸರ್ಕಾರವು ಅವರಿಗೆ ಎಲ್ಲಾ ರೀತಿಯ ಸಹಾಯ ಮಾಡಲು ಮುಂದಾಗಿದೆ. ಮಹಿಳೆಯರ ಆಸಕ್ತಿಗೆ ತಕ್ಕಂತೆ ಉದ್ಯೋಗವನ್ನು ನೀಡುತ್ತಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.

Women Self-Employment Scheme 2025

ರಾಜ್ಯದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ ತರಬೇತಿ ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ ಆರಂಭಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

29 ಜಿಲ್ಲೆಗಳಿಂದ ತಲಾ ಮೂರು ಗ್ರಾಮ ಪಂಚಾಯಿತಿಗಳಂತೆ ಒಟ್ಟು 87, ಬೆಳಗಾವಿ ಜಿಲ್ಲೆಯಲ್ಲಿ 7 ಮತ್ತು ತುಮಕೂರು ಜಿಲ್ಲೆಯ 6 ಗ್ರಾಮ ಪಂಚಾಯಿತಿ ಸೇರಿ ಒಟ್ಟು 100 ಗ್ರಾಮ ಪಂಚಾಯಿತಿಗಳಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.

ಪ್ರತಿ ಕೇಂದ್ರದಲ್ಲಿ ಸ್ವ-ಉದ್ಯೋಗ ಕೈಗೊಳ್ಳುವ ಮಹಿಳೆಯರಿಗೆ ಕೌಶಲ ಅಭಿವೃದ್ಧಿ ನಿಗಮ ಹಾಗೂ ಸರ್ಕಾರೇತರ ಸಂಸ್ಥೆಗಳ ಮೂಲಕ ತರಬೇತಿ ನೀಡಿ, ಬ್ಯಾಂಕುಗಳೊಂದಿಗೆ ಸಂಪರ್ಕ ಏರ್ಪಡಿಸಿ 30 ಸಾವಿರ ಮಹಿಳೆಯರಿಗೆ ಸ್ವ-ಉದ್ಯೋಗ ಆರಂಭಿಸುವಂತೆ ಪ್ರೇರೇಪಿಸಲಾಗುವುದು. ಪ್ರತಿ ತರಬೇತಿ ಕೇಂದ್ರದಿಂದ 300 ಮಹಿಳೆಯರಿಗೆ ಕೌಶಲ ತರಬೇತಿ ನೀಡುವ ಗುರಿ ಹೊಂದಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group