ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ಇಂದಿನ ಲೇಖನಕ್ಕೆ ಸ್ವಾಗತ, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ನೆರವಾಗಲು ಸರ್ಕಾರದಡಿ ಬರುವ ವಿವಿಧ ಉಚಿತ ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶ ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಬಹುದು. ಇದರ ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಮತ್ತು ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಇನ್ನಿತರೆ ವಸತಿ ಕಾಲೇಜುಗಳಲ್ಲಿ 2025-26ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಹತೆಗಳು:
- ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
- ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರೈಸ್ತ, ಜೈನ್, ಸಿದ್ದಿ, ಬೌದ್ಧ, ಪಾರಸಿ ಹಾಗೂ ಪರಿಶಿಷ್ಟ ಜಾತಿ, ಪ.ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿರಬೇಕು.
- ಕರ್ನಾಟಕ ರಾಜ್ಯದ ಎಸ್. ಎಸ್. ಎಲ್. ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಅಥವ COBSE ಪಟ್ಟಿಯಲ್ಲಿರುವ ಬೋರ್ಡ್‌ಗಳಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರಥಮ ಪಿ.ಯು.ಸಿಗೆ ದಾಖಲಾಗಲು ಅರ್ಹರಿರುತ್ತಾರೆ.
- ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ 2.50 ಲಕ್ಷಗಳನ್ನು ಮೀರಿರಬಾರದು.
- ವಿಶೇಷಚೇತನ ವಿದ್ಯಾರ್ಥಿಗಳಿಗೆ ಪ್ರವೇಶಾತಿಯಲ್ಲಿ ಶೇ. 4 ರಷ್ಟು ಸ್ಥಾನಗಳನ್ನು ಮೀಸಲಿರಿಸಿದೆ.
ಅರ್ಜಿ ಸಲ್ಲಿಸುವ ವಿಧಾನ:
ಈ ಪ್ರವೇಶ ಪ್ರಕ್ರಿಯೆಗೆ 10ನೇ ತರಗತಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಆಧಾರಿತ ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನೀವು https://sevasindhu.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ, ಸೂಕ್ತ ಫಾರ್ಮ್‌ನ್ನು ಪೂರ್ಣಗೊಳಿಸಬೇಕು.
ಅಗತ್ಯ ದಾಖಲೆಗಳು:
- ವಿದ್ಯಾರ್ಥಿಯ SSLC ಅಂಕಪಟ್ಟಿ
- ನಿವಾಸ ದೃಡೀಕರಣ ಪತ್ರ
- ಆಧಾರ್ ಕಾರ್ಡ್ ಪ್ರತಿ
- ಮೊಬೈಲ್ ನಂಬರ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪೋಟೋ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ- 03 -05- 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 17 -05- 2025
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೇ ಆನ್ಲೈನ್ | Click Here |
ಇತರೆ ಉದ್ಯೋಗ ಮಾಹಿತಿ:
- ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ನೇಮಕಾತಿ | FAPS Co-operative Society Recruitment 2025
- BOB ಕ್ಯಾಪಿಟಲ್ ಮಾರ್ಕೆಟ್ಸ್ ನೇಮಕಾತಿ | BOB Capital Markets Recruitment 2025
- ಪ್ರಾದೇಶಿಕ ಸೇನಾ ನೇಮಕಾತಿ | Territorial Army Recruitment 2025
- ಕೇಂದ್ರ ಕೈಗಾರಿಕಾ ಭದ್ರತಾ ಪಡೆ ನೇಮಕಾತಿ | CISF Recruitment 2025
- NIT ಕರ್ನಾಟಕ ನೇಮಕಾತಿ | NIT Karnataka Recruitment 2025