ಜಿಲ್ಲಾ ನ್ಯಾಯಾಲಯ ಚಿಕ್ಕಬಳ್ಳಾಪುರ ನೇಮಕಾತಿ | District Court  Chikkaballapura Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಚಾಲಕ, ಶೀಘ್ರಲಿಪಿಗಾರ, ಆದೇಶಜಾರಿಕಾರ ಹಾಗೂ ಇತರೆ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

District Court  Chikkaballapura

ಹುದ್ದೆಯ ಹೆಸರು: ಚಾಲಕ, ಶೀಘ್ರಲಿಪಿಗಾರ, ಆದೇಶಜಾರಿಕಾರ ಹಾಗೂ ಇತರೆ ಹುದ್ದೆಗಳು

ಒಟ್ಟು ಹುದ್ದೆಗಳು: 45

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಶೀಘ್ರಲಿಪಿಗಾರ ಗ್ರೇಡ್‌ 38
ಬೆರಳಚ್ಚುಗಾರ14
ಬೆರಳಚ್ಚು – ನಕಲುಗಾರ6
ಆದೇಶ ಜಾರಿಕಾರ11
ಚಾಲಕ1
ಪ್ಯೂನ್/ಜವಾನ5
  • ಶೀಘ್ರಲಿಪಿಗಾರ ಗ್ರೇಡ್‌ 3 : ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 2nd PUC ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಬೆರಳಚ್ಚುಗಾರ:  ಹುದ್ದೆಗೆಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಸೀನಿಯರ್‌ ಗ್ರೇಡ್ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.‌
  • ಬೆರಳಚ್ಚು – ನಕಲುಗಾರ: ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 2nd PUC ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಕಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ.
  • ಆದೇಶ ಜಾರಿಕಾರ:  SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
  • ಚಾಲಕ: ಹುದ್ದೆಗೆ ಅರ್ಜಿಸಲ್ಲಸುವ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
  • ಪ್ಯೂನ್/ಜವಾನ: ಹುದ್ದೆಗೆ ಅರ್ಜಿಸಲ್ಲಸುವ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ಚಿಕ್ಕಬಳ್ಳಾಪುರ ಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.

  • SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
  • ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷ
  • PH ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
  • SC/ST/Cat-I/Cat-2A/2B/3A & 3B ಅಭ್ಯರ್ಥಿಗಳಿಗೆ: ರೂ.100/-
  • ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.200/-
  • ಪಾವತಿ ವಿಧಾನ: ಆನ್‌ಲೈನ್

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹17,000-52,650/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ chikkaballapur.dcourts.gov.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
  • ಚಾಲಕ, ಬೆರಳಚ್ಚುಗಾರ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 18-12-2023 ರಿಂದ 17-01-2024 ರವರೆಗೆ ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ chikkaballapur.dcourts.gov.in ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18-12-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-01-2024
  • ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 18-01-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group