ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು
ಒಟ್ಟು ಹುದ್ದೆಗಳು: 06
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಶೀಘ್ರಲಿಪಿಗಾರರು ಗ್ರೇಡ್ 3 | 3 |
ಬೆರಳಚ್ಚುಗಾರರು | 2 |
ಬೆರಳಚ್ಚು-ನಕಲುಗಾರರು | 1 |
ವಿದ್ಯಾರ್ಹತೆ:
- ಶೀಘ್ರಲಿಪಿಗಾರರು ಗ್ರೇಡ್ 3: ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 2nd PUC ಅಥವಾ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಬೆರಳಚ್ಚುಗಾರರು: ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಸೀನಿಯರ್ ಗ್ರೇಡ್ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಬೆರಳಚ್ಚು-ನಕಲುಗಾರರು: ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಕಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ.
ವಯೋಮಿತಿ:
ರಾಮನಗರ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
- SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
- Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ
ಅರ್ಜಿಶುಲ್ಕ:
- SC/ST/Cat-I/PH ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
- Cat-I/Cat-2A/2B/3A & 3B ಅಭ್ಯರ್ಥಿಗಳಿಗೆ: ರೂ.100/-
- ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.200/-
- ಪಾವತಿ ವಿಧಾನ: ಆನ್ಲೈನ್
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹21400-52650/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ರಾಮನಗರ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಧಿಸೂಚನೆಯಂತೆ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ @ ramanagara.dcourts.gov.in ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ರಾಮನಗರ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರಾಮನಗರ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ramanagara.dcourts.gov.in ನಲ್ಲಿ 22-12-2023 ರಿಂದ 22-01-2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22-12-2023
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-01-2024
- ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 23-01-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- LIC ನೇಮಕಾತಿ | LIC Recruitment 2023
- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ | District Health and Family Welfare Department Recruitment 2023
- ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನೇಮಕಾತಿ | Air India Engineering Services Limited Recruitment 2023-24
- ಆದಾಯ ತೆರಿಗೆ ಇಲಾಖೆ ನೇಮಕಾತಿ | Income Tax Department Recruitment 2023-24
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ | Central Bank of India Recruitment 2023-24