ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

ಹುದ್ದೆಯ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು: 54
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಗಳ ವಿವರ:
- ಶೀಘ್ರಲಿಪಿಗಾರರು ಗ್ರೇಡ್ 3 -10 ಹುದ್ದೆ
- ಬೆರಳಚ್ಚುಗಾರರು – 6 ಹುದ್ದೆ
- ಬೆರಳಚ್ಚು ನಕಲುಗಾರರು – 2 ಹುದ್ದೆ
- ಜವಾನ – 36 ಹುದ್ದೆ
ವಿದ್ಯಾರ್ಹತೆ:
- ಶೀಘ್ರಲಿಪಿಗಾರರು ಗ್ರೇಡ್ 3 : ದ್ವಿತೀಯ ಪಿಯುಸಿ ಉತ್ತೀರ್ಣ ಹಾಗೂ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಮತ್ತು ಬೆರಳಚ್ಚು ಹಿರಿಯ ದರ್ಜೆ ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯೊಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯವನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು
- ಬೆರಳಚ್ಚುಗಾರರು – ದ್ವಿತೀಯ ಪಿಯುಸಿ ಉತ್ತೀರ್ಣ ಹಾಗೂ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ ಉತ್ತೀರ್ಣರಾಗಿರಬೇಕು.
- ಬೆರಳಚ್ಚು ನಕಲುಗಾರರು – ದ್ವಿತೀಯ ಪಿಯುಸಿ ಉತ್ತೀರ್ಣ ಹಾಗೂ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ OR ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಕಿರಿಯ ದರ್ಜೆ ಉತ್ತೀರ್ಣರಾಗಿರಬೇಕು.
- ಜವಾನ – 10ನೇ ತರಗತಿ ಉತ್ತೀರ್ಣ ಹಾಗೂ ಕನ್ನಡ ಓದಲು ಬರೆಯಲು ತಿಳಿದಿರಬೇಕು.
ವಯೋಮಿತಿ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು
- ಪ್ರವರ್ಗ -1, SC/ST ಅಭ್ಯರ್ಥಿಗಳಿಗೆ – 40 ವರ್ಷ
- ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ – 38 ವರ್ಷ
- ಸಾಮಾನ್ಯ ಅಭ್ಯರ್ಥಿಗಳಿಗೆ – 35 ವರ್ಷ
ಅರ್ಜಿಶುಲ್ಕ:
- ಸಾಮಾನ್ಯ ವರ್ಗ, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳು – ₹200
- SC/ST, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.
- ಪಾವತಿ ವಿಧಾನ: ಆನ್ ಲೈನ್
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹17,000-52,650/- ರೂ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
- ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಬೆರಳಚ್ಚು ಯಂತ್ರ/ ಕಂಪ್ಯೂಟರ್ ನಲ್ಲಿ ಬೆರಳಚ್ಚು ಪರೀಕ್ಷೆ ನಡೆಸಿ ಆಯ್ಕೆ ಮಾಡಲಾವುದು
- ಜವಾನ ಹುದ್ದೆಗಳಿಗೆ 10 ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 06/11/2023
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 05/12/2023
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಆಪ್ಲೈ ಆನ್ಲೈನ್ | 06-11-2023 ರಿಂದ ಪ್ರಾರಂಭ |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- KSRTC ಡ್ರೈವರ್, ಕಂಡಕ್ಟರ್ ನೇಮಕಾತಿ 2023 | KSRTC Recruitment 2023
- ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ | RDWSD Recruitment 2023
- ಜಿಲ್ಲಾ ಪಂಚಾಯತ್ ಧಾರವಾಡ ನೇಮಕಾತಿ | Zilla Panchayat Dharwad Recruitment 2023
- ಕೋಲಾರ ಜಿಲ್ಲಾ ಪಂಚಾಯತ್ ನೇಮಕಾತಿ | Kolar Zilla Panchayat Recruitment 2023