ಗೃಹ ಆರೋಗ್ಯ ಯೋಜನೆ | Gruha Arogya Scheme 2024

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಕರ್ನಾಟಕ ಸರ್ಕಾರವು ಪ್ರತಿಯೊಬ್ಬರ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸಿ ಆರೋಗ್ಯ ತಪಾಸಣೆ ನಡೆಸುವ ನಿಟ್ಟಿನಲ್ಲಿ ಈ ಹೊಸ ಯೋಜನೆ ಜಾರಿಗೊಳಿಸಿದೆ. ರಾಜ್ಯ ಪ್ರತಿಯೊಬ್ಬರ ಮನೆಬಾಗಿಲಿಗೆ ಔಷಧ ಪೆಟ್ಟಿಗೆ ವಿತರಿಸುವ ಮಹತ್ವಾಕಾಂಕ್ಷಿ ‘ಗೃಹ ಆರೋಗ್ಯ ಯೋಜನೆ’ ಜಾರಿಗೆ ತಂದಿದೆ. ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.

Gruha Arogya Scheme 2024

ವೈದ್ಯರ ತಂಡವು ಮನೆ ಮನೆಗೆ ಭೇಟಿ ಮಾಡಿ ಆಯ್ದ ಸಮಸ್ಯೆಗಳಿಗೆ ಉಚಿತವಾಗಿ ಔಷಧ ಒದಗಿಸುವ ‘ಗೃಹ ಆರೋಗ್ಯ’ ಯೋಜನೆಯಾಗಿದೆ. ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆ ಎದುರಿಸುತ್ತಿರುವವರಿಗೆ ಮೂರು ತಿಂಗಳಿಗೆ ಆಗುವಷ್ಟು ಮಾತ್ರೆಗಳನ್ನು ವಿತರಿಸಲಾಗುತ್ತದೆ. ಮನೆ ಮನೆ ಆರೋಗ್ಯ ತಪಾಸಣೆ ವೇಳೆ ಸಮಸ್ಯೆ ದೃಢಪಟ್ಟವರಿಗೆ ಹಾಗೂ ಈಗಾಗಲೇ ಸಮಸ್ಯೆ ಇರುವವರಿಗೆ 90 ಮಾತ್ರೆಗಳನ್ನು ಒಳಗೊಂಡ ಔಷಧ ಪೆಟ್ಟಿಗೆಗಳನ್ನು ಉಚಿತವಾಗಿ ನೀಡುವುದು ಯೋಜನೆಯ ಉದ್ದೇಶ. ದೊಡ್ಡ ಕಾರ್ಯಕ್ರಮ ಮಾಡುವ ಮೂಲಕ ಈ ಯೋಜನೆಗೆ ಚಾಲನೆ ಕೊಡಲು ಆರೋಗ್ಯ ಇಲಾಖೆ ಪ್ಲಾನ್ ಮಾಡಿಕೊಂಡಿದೆ.

30 ವರ್ಷ ಮೇಲ್ಪಟ್ಟವರು ಮಾತ್ರೆಗಳನ್ನು ಪಡೆಯಲು ಅರ್ಹರು. ಮಧುಮೇಹ ಹಾಗೂ ಅಧಿಕ ರಕ್ತದೊತ್ತಡಕ್ಕೆ ತಲಾ ಮೂರು ಮಾದರಿ ಮಾತ್ರೆಗಳನ್ನು ಸರ್ಕಾರ ಗುರುತಿಸಿದೆ. ಅವುಗಳನ್ನು ಮಾತ್ರವೇ ನೀಡಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಯೋಜನೆಯು ರಾಜ್ಯದ 8 ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗಿದೆ.

ರಾಜ್ಯದ ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ‘ಗೃಹ ಆರೋಗ್ಯ ಯೋಜನೆ’ ಜಾರಿಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆಯ್ದ ಸಮಸ್ಯೆಗಳಿಗೆ ಉಚಿತವಾಗಿ ಔಷಧ ದೊರೆಯಲಿದೆ. ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಕುಟುಂಬದ ಎಲ್ಲ ಸದಸ್ಯರ ಆರೋಗ್ಯ ತಪಾಸಣೆ ನಡೆಸಲಿದ್ದಾರೆ.

JNCASR Jobs Recruitment 2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here

Leave a Reply

Join WhatsApp Group